ಲಾಹೋರ್:ಅಚ್ಚರಿಯ ಬೆಳವಣಿಗೆಯಲ್ಲಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪಕ್ಷದ ಮುಖ್ಯಸ್ಥ ಮತ್ತು ಮೂರು ಬಾರಿಯ ಮಾಜಿ ಪ್ರಧಾನಿ ನವಾಜ್ ಷರೀಫ್ ಬದಲಿಗೆ ಅದರ ಅಧ್ಯಕ್ಷ ಶೆಹಬಾಜ್ ಷರೀಫ್ ಅವರನ್ನು ಪಾಕಿಸ್ತಾನದ ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದರು.
ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ವಕ್ತಾರ ಮರಿಯುಮ್ ಔರಂಗಜೇಬ್ ಅವರು ಪಿಎಂಎಲ್-ಎನ್ ಮುಖ್ಯಸ್ಥ ನವಾಜ್ ಷರೀಫ್, 74, ತಮ್ಮ ಕಿರಿಯ ಸಹೋದರ ಶೆಹಬಾಜ್ ಷರೀಫ್ (72) ಅವರನ್ನು ಪ್ರಧಾನಿ ಸ್ಥಾನಕ್ಕೆ ಮತ್ತು ಅವರ ಪುತ್ರಿ ಮರಿಯಂ ನವಾಜ್ (50) ಅವರನ್ನುಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದಾರೆ.