ಇಸ್ಲಾಮಾಬಾದ್ : ತಡರಾತ್ರಿ ಪಾಕಿಸ್ತಾನದ ಉಗ್ರರ ಕ್ಯಾಂಪ್ ಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಈ ಒಂದು ಕ್ಷಿಪಣಿ ದಾಳಿಗೆ ಸುಮಾರು 100ಕ್ಕೂ ಹೆಚ್ಚು ಉಗ್ರರು ಸಾವನಪ್ಪಿದ್ದಾರೆ. ಇದೀಗ ಉಗ್ರರ ಶವಗಳನ್ನು ಪಾಕಿಸ್ತಾನಿಯರು ಟ್ರ್ಯಾಕ್ಟರ್ ನಲ್ಲಿ ಸಾಗಿಸುತ್ತಿರುವ ಫೋಟೋ ವೈರಲ್ ಆಗಿದೆ.
ಹೌದು ಭಾರತ ಸೇನೆಯ ಆಪರೇಷನ್ ಸಿಂಧೂರಕ್ಕೆ ತತ್ತರಿಸಿರುವ ಪಾಕ್, ಉಗ್ರರ ಶವಗಳಿಗೆ ಧ್ವಜ ಹೊದಿಸಿ ಟ್ರ್ಯಾಕ್ಟರ್‌ನಲ್ಲಿ ಸಾಗಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ವೀಡಿಯೋ ಕ್ಲಿಪ್‌ನಲ್ಲಿ, ಭಯೋತ್ಪಾದಕರ ಶವಗಳಿಗೆ ಪಾಕ್ ಧ್ವಜ ಹೊದಿಸಿ ಗೌರವ ಸೂಚಿಸಲಾಗಿದೆ. ಈ ಶವಗಳನ್ನು ಬಹಾವಲ್ಪುರದ ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗುತ್ತಿತ್ತು. ಉಗ್ರರ ಶವಗಳ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನೆಯ ಅಧಿಕಾರಿಗಳು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.
ನಿಷೇಧಿತ ಜೈಶ್ -ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ನೆಲೆಯಿರುವ ಬಹವಾಲ್‍ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‍ನಲ್ಲಿನ ಸರ್ಜಾಲ್, ಕೋಟಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‍ನ ಸೈಯನ್ನಾ ಬಿಲಾಲ್ ಕ್ಯಾಂಪ್‍ಗಳ ಮೇಲೆ ಭಾರತ ದಾಳಿ ನಡೆಸಿದೆ. ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಿಬಿರಗಳಿರುವ ಮುರ್ಡಿಕೆಯ ಮರ್ಕಝ್ ತೈಬಾ, ಬರ್ನಾಲಾದಲ್ಲಿ ಮರ್ಕಝ್ ಅತ್ತೆ ಹದಿತ್ ಮತ್ತು ಮುಜಫರಾಬಾದ್‍ನ ಶ್ವವಾಯಿ ನಲ್ಲಾ ಮೇಲೆ ದಾಳಿ ನಡೆದಿದೆ.