ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಸಂಬಂಧ ಬೆಳಗಾವಿಯ ಸುವರ್ಣಸೌಧದ ಎದುರುಗಡೆ ಪಂಚಮಸಾಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಈ ಒಂದು ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ತಾಳಿದ್ದು ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೌದು ಇಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯೋದಕ್ಕೆ ಪೊಲೀಸರು ಎಷ್ಟೇ ಹರಸಾಹಸ ಪಟ್ಟರು ಸಾಧ್ಯವಾಗಲಿಲ್ಲ.ಈ ಹಿನ್ನಲೆಯಲ್ಲಿ ಪ್ರತಿಭಟನಾಕಾರರ ಮೇಲೆ ಎಡಿಜಿಪಿ ಹಿತೇಂದ್ರರಿಂದಲೇ ಲಾಠಿಚಾರ್ಜ್ ನಡೆಸಲಾಯಿತು. ಲಾಠಿ ಏಟು ತಿಂದರು.
ತಮ್ಮ ಹಠವನ್ನು ಬಿಡದಂತ ಅನೇಕರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಮುಂದಾದರು. ಪೊಲೀಸರ ಲಾಠಿ ಏಟಿನಿಂದಾಗಿ 50ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇವಳೇ ಶಾಸಕ ಯತ್ನಾಳ್ ಹಾಗೂ ಬಸವ ಜಯ ಮೃತ್ಯುಂಜಯ ಶ್ರೀಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.