ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಆಪ್ತ ಧನ್ವೀರ್ ವಿಡಿಯೋ ರಿಲೀಸ್ ಮಾಡಿದ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ಆರೋಪಿ ದರ್ಶನ ಆಪ್ತ ಧನ್ವೀರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಿನ್ನೆ ನಟ ಧನ್ವೀರ್ ನನ್ನು ಸಿಸಿಬಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಮೊಬೈಲ್ ನಲ್ಲಿ ಮಾತನಾಡುತ್ತಿರುವುದು ಮದ್ಯ ಸೇವಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಒಂದು ವಿಡಿಯೋ ಕುರಿತಂತೆ ಕೊಲೆ ಆರೋಪಿ ದರ್ಶನ್ ಆಪ್ತ ಧನ್ವಿರ್ ನನ್ನ ಕರೆಸಿ ವಿಚಾರಣೆ ನಡೆಸಿದ್ದಾರೆ.







