BREAKING : ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4 ರ ವಿಜೇತೆ `ಮೆಬಿನ್ ಮೈಕಲ್’ ಇನ್ನಿಲ್ಲ – Kannada News Now


State

BREAKING : ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4 ರ ವಿಜೇತೆ `ಮೆಬಿನ್ ಮೈಕಲ್’ ಇನ್ನಿಲ್ಲ

ಮಂಡ್ಯ : ಕನ್ನಡದ ಖ್ಯಾತ ರಿಯಾಲಿಟಿ ಶೋ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4 ರ ವಿಜೇತೆ ಮೆಬಿನಾ ಮೈಕಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ ಸಮೀಪ ಮಂಗಳವಾರ ಸಂಜೆ 4.30 ರ ವೇಳೆಗೆ ಅಪಘಾತ ಸಂಭವಿಸಿರುವ ಕುರಿತು ಮಾಹಿತಿ ಲಭಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೆಬಿನಾ ಸಾವನ್ನಪ್ಪಿದ್ದಾರೆ.

ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ರಿಯಾಲಿಟಿ ಶೋ 4 ವಿನ್ನರ್ ಆಗಿ ಮೆಬಿನಾ ಹೊರಹೊಮ್ಮಿದ್ದರು. ಮಾಡೆಲ್ ಆಗಿದ್ದ ಮೆಬಿನಾ ಸಾಕಷ್ಟು ಖ್ಯಾತಿ ಪಡೆದಿದ್ದರು.