ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪರಕರಣದಲ್ಲಿ ಜೈಲು ಪಾಲಾಗಿರುವ ಪವಿತ್ರಾಗೌಡಗೆ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ಸಂಖ್ಯೆ ನೀಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಆರೋಪಿ ಪವಿತ್ರಾಗೌಡಗೆ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ ವಿತರಣೆ ಮಾಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಹಲವರು ಜೈಲು ಪಾಲಾಗಿದ್ದಾರೆ.
ನಟ ದರ್ಶನ್ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲು ವಕೀಲ ರಾಘವೇಂದ್ರ ಅವರು ಸಿದ್ದತೆ ನಡೆಸಿದ್ದು, ಈ ನಡುವೆ ಕೋರ್ಟ್ ನಲ್ಲಿ ದರ್ಶನ್ ಪರ ವಾದ ಮಂಡಿಸಲು ಹಿರಿಯ ವಕೀಲ ಸಿ.ವಿ.ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಈಗಾಗಲೇ ವಕೀಲ ರಾಘವೇಂದ್ರ ಅವರು ನಾಗೇಶ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಕೊಲೆ ಪ್ರಕರಣದಿಂದ ಪಾರಾಗಲು ಹಾಗೂ ಸಾಕ್ಷ್ಯ ನಾಶ ಮಾಡಲು 40 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎಂದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.