ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದು, ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ.
ಇಂದು ಪವಿತ್ರಾಗೌಡ ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಪವಿತ್ರಾಗೌಡ ತಾಯಿ ಭಾಗ್ಯಮ್ಮ ಬೆಂಗಳೂರಿನ ವಜ್ರಮುನೇಶ್ವರ ದೇಗುಲದಲ್ಲಿ ದರ್ಶನ್ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ ಎನ್ನಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಹೈಕೋರ್ಟ್ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್, ಪವಿತ್ರ ಗೌಡ, ನಾಗರಾಜು, ಅನು ಕುಮಾರ್, ಎಂ ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೋಷ್ ರಾವ್ ಗೆ ಹೈಕೋರ್ಟ್ ಜಾಮೀನು ನೀಡಿದೆ. ಹೈಕೋರ್ಟ್ ನಿಂದ ಜಾಮೀನು ಪ್ರತಿ ಸಿಕ್ಕಿದ್ದು ಕೂಡಲೇ ಜೈಲಿನ ಮುಖ್ಯ ಅಧಿಕಾರಿಗಳಿಗೆ ತಲುಪಿಸಗಿದೆ. ಈ ಹಿನ್ನೆಲೆಯಲ್ಲಿ ಇಂದು ಜೈಲಿಂದ ಅವರು ರಿಲೀಸ್ ಆಗಿದ್ದು, ಟೆಂಪಲ್ ರನ್ ಮಾಡುತ್ತಿದ್ದಾರೆ.