ರಾಮನಗರ : ಗುತ್ತಿಗೆದಾರರೊಬ್ಬರ ಬಳಿ 20 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ PDO ಅಧಿಕಾರಿಯೊಬ್ಬ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಮುನಿರಾಜು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.ಗುತ್ತಿಗೆದಾರ ವೆಂಕಟಾಚಲಯ್ಯ ಎಂಬವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಿದ ಕೆಲಸಕ್ಕೆ ಸಂಬಂಧಿಸಿದಂತೆ ಪಿಡಿಒ ಮುನಿರಾಜು 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಗುತ್ತಿಗೆದಾರ ರಾಮನಗರ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ರಾಮನಗರ ಲೋಕಾಯುಕ್ತ ಪೊಲೀಸರು ಪಿಡಿಒ ಮುನಿರಾಜು ಅವರನ್ನು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಪಿಡಿಒ ಮುನಿರಾಜುನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.