ಬೆಂಗಳೂರು : ವಿದ್ಯುತ್ ತರ ಏರಿಸುವ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಈಗಾಗಲೇ ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿವೆ. ಪ್ರತಿ ಯುನಿಟ್ ದರ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KSRC)ಕ್ಕೆ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
2025-26 ರಲ್ಲಿ ಪ್ರತಿ ಯೂನಿಟ್ ಗೆ 67 ಪೈಸೆ, 2026-27 ರಲ್ಲಿ ಪ್ರತಿ ಯೂನಿಟ್ಗೆ 75 ಪೈಸೆ ಹಾಗೂ 2027-28 ರಲ್ಲಿ 91 ಪೈಸೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನ.30 ಕೊನೆಯ ದಿನವಾಗಿತ್ತು. ಆ ಗಡುವಿನೊಳಗೆ ಎಲ್ಲಾ ಎಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿವೆ. ದರ ಏರಿಕೆ ಒಟ್ಟೊಟ್ಟಿಗೆ ಬಹುತೇಕ ಏಕ ಮಾದರಿಯಲ್ಲಿಯೇ ಆಗಲಿದೆ ಎಂದು ಕೆಇಆರ್‌ಸಿ ಮೂಲಗಳು ತಿಳಿಸಿವೆ.
ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನವೆಂಬರ್ 30 ಕೊನೆ ದಿನವಾಗಿತ್ತು. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆಬ್ರುವರಿಯಲ್ಲಿ ಉದ್ಯಮಿಗಳು, ವ್ಯಾಪಾರಸ್ಥರು, ಸಾರ್ವಜನಿಕರು, ತಜ್ಞರ ಸಭೆ ನಡೆಸಲಿದ್ದು, ಅಹವಾಲು ಸ್ವೀಕಾರ ಮಾಡಲಿದೆ. ಬಳಿಕ ಸಾಧಕ ಸಾಧಕ ಗಳ ಪರಿಶೀಲನೆ ಮಾಡಿ, ಪರ ವಿರೋಧಗಳ ಆಲಿಕೆ ನಂತರ ಮಾರ್ಚ್ ತಿಂಗಳಲ್ಲಿ ದರ ಏರಿಕೆ ಬಗ್ಗೆ ಅಂತಿಮ ಆದೇಶ ಹೊರಡಿಸಲಿದ್ದು, ಏಪ್ರಿಲ್ 1 2025 ರಿಂದ ನೂತನ ದರ ಜಾರಿ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ