ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವ್ಯಕ್ತಿ ಒಬ್ಬ ವಿದ್ಯುತ್ ತಂತಿ ತುಳಿದು ನರಳಿ ನರಳಿ ಪ್ರಾಣ ಬಿಟ್ಟಿದ್ದಾನೆ ಎಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ವ್ಯಕ್ತಿ ಬಲಿಯಾಗಿದ್ದಾನೆ. ರಸ್ತೆ ಬದಿಯಲ್ಲಿರುವಂತಹ ವಿದ್ಯುತ್ ತಂತಿ ನರಳಿ ಪ್ರಾಣ ಬಿಟ್ಟಿದ್ದಾನೆ. ತಂತಿ ತಗುಲಿ, ರಾಜಸ್ಥಾನದ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾನೆ.
ನವನಗರದ 49ನೇ ಸೆಕ್ಟರ್ ನಲ್ಲಿ ಈ ಒಂದು ದುರಂತ ಸಂಭವಿಸಿದೆ. ಪವರ್ ಜಂಕ್ಷನ್ ಬಾಕ್ಸ್ ಪಕ್ಕದಲ್ಲಿ ತಂತಿ ಬಿದ್ದಿತ್ತು. ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ನರಳಿ ಪ್ರಾಣ ಬಿಡುತ್ತಿರುವ ವಿಡಿಯೋ ಕೂಡ ಸೆರೆಯಾಗಿದೆ. ಇದೀಗ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರ ಹಾಕಿದ್ದಾರೆ. ನೆಲಕ್ಕೆ ಬಿದ್ದಿದ್ದ ತಂತಿ ತೆಗೆದುಹಾಕಿ ಎಂದು ಸಿಬ್ಬಂದಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ








