ಮಂಗಳವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 90 ಪೈಸೆ ಹೆಚ್ಚಳ ಮಾಡಲಾಗಿದ್ದು, ಇದು ಕೇವಲ ಒಂದು ವಾರದ ಅವಧಿಯಲ್ಲಿ ನಡೆದಿರುವ ಎರಡನೇ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 97.77 ರೂಪಾಯಿಗಳಿಂದ 98.64 ರೂಪಾಯಿಗಳಿಗೆ ಏರಿಕೆಯಾಗಿದೆ. ಇನ್ನು ಉದ್ಯಮದ ಮೂಲಗಳ ಪ್ರಕಾರ, ಡೀಸೆಲ್ ಬೆಲೆ ಈ ಹಿಂದಿನ 90.67 ರೂಪಾಯಿಗಳ ಬದಲಾಗಿ ಈಗ ಪ್ರತಿ ಲೀಟರ್‌ಗೆ 91.58 ರೂಪಾಯಿಗಳಾಗಿದೆ.
ಒಂದು ವಾರದೊಳಗೆ ಇಂಧನ ದರ ಹೆಚ್ಚಳವಾಗಿರುವುದು ಇದು ಎರಡನೇ ಬಾರಿಯಾಗಿದೆ. ಇದಕ್ಕೂ ಮುನ್ನ ಕಳೆದ ಶುಕ್ರವಾರವಷ್ಟೇ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು.
ದೆಹಲಿಯಲ್ಲಿ ಪೆಟ್ರೋಲ್ ಈಗ ಲೀಟರ್‌ಗೆ 87 ಪೈಸೆ ಏರಿಕೆಯಾಗಿ 98.64 ರೂಪಾಯಿಗಳಿಗೆ ಮಾರಾಟವಾಗುತ್ತಿದ್ದರೆ, ಡೀಸೆಲ್ ಬೆಲೆ 91 ಪೈಸೆ ಹೆಚ್ಚಳವಾಗಿ ಪ್ರತಿ ಲೀಟರ್‌ಗೆ 91.58 ರೂಪಾಯಿಗಳಾಗಿದೆ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ 91 ಪೈಸೆ ಏರಿಕೆಯಾಗಿ ಪ್ರತಿ ಲೀಟರ್‌ಗೆ 107.59 ರೂಪಾಯಿಗಳಿಗೆ ಹಾಗೂ ಡೀಸೆಲ್ ಬೆಲೆ 94 ಪೈಸೆ ಹೆಚ್ಚಳವಾಗಿ ಪ್ರತಿ ಲೀಟರ್‌ಗೆ 94.08 ರೂಪಾಯಿಗಳಿಗೆ ತಲುಪಿದೆ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಅತ್ಯಂತ ಗರಿಷ್ಠ ಅಂದರೆ 96 ಪೈಸೆ ಹೆಚ್ಚಳ ದಾಖಲಾಗಿದ್ದು, ಪ್ರತಿ ಲೀಟರ್‌ಗೆ 109.70 ರೂಪಾಯಿಗಳಾಗಿದೆ. ಇನ್ನು ಡೀಸೆಲ್ ಬೆಲೆ 94 ಪೈಸೆ ಏರಿಕೆಯಾಗಿ ಪ್ರತಿ ಲೀಟರ್‌ಗೆ 96.07 ರೂಪಾಯಿಗಳಾಗಿದೆ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 82 ಪೈಸೆ ಹೆಚ್ಚಳವಾಗಿ ಪ್ರತಿ ಲೀಟರ್‌ಗೆ 104.49 ರೂಪಾಯಿಗಳಿಗೆ ಹಾಗೂ ಡೀಸೆಲ್ ಬೆಲೆ 86 ಪೈಸೆ ಏರಿಕೆಯಾಗಿ ಪ್ರತಿ ಲೀಟರ್‌ಗೆ 96.11 ರೂಪಾಯಿಗಳಿಗೆ ತಲುಪಿದೆ.








