ಬೆಂಗಳೂರು : ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಇದೀಗ ಹೈಕೋರ್ಟ್ ನಾಳೆ ಸಾರಿಗೆ ಬಂದ್ ಮಾಡದಂತೆ ಆದೇಶ ನೀಡಿದೆ.
ಹೌದು ನಾಳಿನ ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ.ನಾಳೆ ಒಂದ್ ದಿನದ ಮಟ್ಟಿಗೆ ಮುಷ್ಕರ ನಡೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ.ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ನಾಳೆಯಿಂದ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯುವುದು ಅನುಮಾನ ಎನ್ನಲಾಗಿತ್ತು. ಇದೀಗ ಹೈಕೋರ್ಟ್ ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ.