ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎನ್ನುವ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುವ ಸಂದರ್ಭದಲ್ಲಿ ರಸ್ತೆಯ ತಡೆಗೋಡೆ ಮೇಲೆ ಚಿರತೆ ಪ್ರತ್ಯಕ್ಷವಾಗಿದೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ನಾಪತ್ತೆಯಾಗಿದ್ದು, ತಡೆಗೋಡೆಗೆ ಬಿದ್ರಾ? ಅಥವಾ ಪ್ರವೀಣ್ ಗೆ ಚಿರತೆ ಹೊತ್ತು ಹೋಗಿದೆಯಾ? ಎಂಬ ಶಂಕೆ ವ್ಯಕ್ತವಾಗಿದೆ. ಈವರೆಗೆ ಪ್ರವೀಣ್ ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








