ಮುಂಬೈ : ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭೀಕರ ವಿಮಾನ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಈ ಕುರಿತು ವಿಮಾನ ರನ್ವೇ ಬಳಿಯೇ ಹಾರುತ್ತಿತ್ತು.ರನ್ವೇ ಸಮೀಪಿಸಲು ಇನ್ನೇನು 100 ಅಡಿ ಇದ್ದಾಗ ಪತನಗೊಂಡು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತ್ಯಕ್ಷ ದರ್ಶಿ ಒಬ್ಬರು, ವಿಮಾನ ನೆಲಕ್ಕೆ ಬಿದ್ದ ಕೂಡಲೇ ದೊಡ್ಡ ಸ್ಫೋಟಗೊಂಡಿತು. ನಂತರ 4-5 ಹೆಚ್ಚಿನ ಸ್ಫೋಟಗಳು ಸಂಭವಿಸಿದವು. ವಿಮಾನ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಳ್ಳುವುದನ್ನು ನೋಡಿದ ಕೂಡಲೇ ನಾವು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಹೊರಗೆ ತೆಗೆಯಲು ಪ್ರಯತ್ನಪಟ್ಟೆವು. ಆದರೆ ಬೆಂಕಿಯ ಜ್ವಾಲೆಯಿಂದ ನಮಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.
ಅಜಿತ್ ಪವಾರ್ ಇಂದು ಬೆಳಿಗ್ಗೆ 8:10ಕ್ಕೆ ಮುಂಬೈನಿಂದ ತಮ್ಮ ಸ್ವಕ್ಷೇತ್ರ ಬಾರಾಮತಿಗೆ ಖಾಸಗಿ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. 8:45ರ ವೇಳೆಗೆ ಅವರ ವಿಮಾನ ಬಾರಾಮತಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಲ್ಯಾಂಡ್ ಆಗುವ ಕೆಲ ಸೆಕೆಂಡ್ ಮೊದಲು ವಿಮಾನ ಪತನವಾಗಿದೆ. ಅಜಿತ್ ವಾರ್ ಜೊತೆಗೆ ಅವರ ಆಪ್ತ ಸಹಾಯಕ, ಇಬ್ಬರು ಪೈಲೆಟ್ ಸೇರಿದಂತೆ ಐವರು ಈ ಒಂದು ದುರಂತದಲ್ಲಿ ಸಾವನಪ್ಪಿದ್ದಾರೆ.








