ಬೆಂಗಳೂರು : ಐಪಿಎಲ್ 18 ನೇ ಆವೃತ್ತಿಯ ಫೈನಲ್ ನಲ್ಲಿ ಪಂಜಾಬ್ ಮಣಿಸಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಅಹಮದಾಬಾದ್ ನಿಂದ ವಿಶೇಷ ವಿಮಾನದ ಮೂಲಕ ಆರ್ ಸಿಬಿ ಆಟಗಾರರು ಆಗಮಿಸಿದ್ದು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
ಸ್ಟಾರ್ ಏರ್ ನ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಹಿನ್ನೆಲೆ, ಅಹ್ಮದಾಬಾದ್ ನಿಂದ ನೇರವಾಗಿ ಎಚ್ಎಎಲ್ ಏರ್ಪೋರ್ಟಿಗೆ ಬಂದಿಳಿದಿದ್ದಾರೆ.. ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ವಿಮಾನ ಎಚ್ಎಎಲ್ ಗೆ ಬಂದು ಇಳಿದಿದೆ.