ನವದೆಹಲಿ : ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಐದು ವರ್ಷಗಳಲ್ಲಿ ದೇಶದ ವೈದ್ಯಕೀಯ ಕಾಲೇಜುಗಳಲ್ಲಿ 75,000 ಹೊಸ ಸೀಟುಗಳನ್ನು ಸೃಷ್ಟಿಸಲಾಗುವುದು ಎಂದು ತಿಳಿಸಿದ್ದಾರೆ.
ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ದೇಶದ ವೈದ್ಯಕೀಯ ಕಾಲೇಜುಗಳಲ್ಲಿ 75,000 ಹೊಸ ಸೀಟುಗಳನ್ನು ಸೃಷ್ಟಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ವಿಕ್ಷಿತ್ ಭಾರತ್ 2047 ಕೂಡ ‘ಸ್ವಸ್ಥ ಭಾರತ್’ ಆಗಿರಬೇಕು ಮತ್ತು ಇದಕ್ಕಾಗಿ ನಾವು ರಾಷ್ಟ್ರೀಯ ಪೋಷಣ್ ಮಿಷನ್ ಅನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದರು.
#WATCH | During his #IndependenceDay2024 speech, PM Modi announces, "In the next five years, 75,000 new seats will be created in medical colleges in India. Viksit Bharat 2047 should also be 'Swasth Bharat' and for this, we have started Rashtriya Poshan Mission." pic.twitter.com/IvVLVYPGKK
— ANI (@ANI) August 15, 2024
ಕಳೆದ 10 ವರ್ಷಗಳಲ್ಲಿ 10 ಕೋಟಿ ಮಹಿಳೆಯರು ಮಹಿಳಾ ಸ್ವಸಹಾಯ ಗುಂಪುಗಳಿಗೆ ಸೇರಿದ್ದಾರೆ. 10 ಕೋಟಿ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾದಾಗ ಅವರು ಕುಟುಂಬದಲ್ಲಿ ನಿರ್ಧಾರ ತೆಗೆದುಕೊಳ್ಳುವ ವ್ಯವಸ್ಥೆಯ ಭಾಗವಾಗುತ್ತಾರೆ, ಇದು ಸಾಮಾಜಿಕ ಬದಲಾವಣೆಗೆ ಕಾರಣವಾಗುತ್ತದೆ … ಇಲ್ಲಿಯವರೆಗೆ, ದೇಶದಲ್ಲಿ ಸ್ವಸಹಾಯ ಗುಂಪುಗಳಿಗೆ 9 ಲಕ್ಷ ಕೋಟಿ ರೂ.ಸೌಲಭ್ಯ ನೀಡಲಾಗಿದೆ ಎಂದರು.