ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ.
ಕರೂರ್ ಕಾಲ್ತುಳಿತದ ದುರಂತದಲ್ಲಿ ಮೃತಪಟ್ಟವರ ಕುಟುಮಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ ನಡೆದ ದುರದೃಷ್ಟಕರ ಘಟನೆ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ತುಂಬಲಿ ಎಂದು ಹಾರೈಸುತ್ತೇನೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ. ಗಾಯಾಳುಗಳಿಗೆ 50,000 ರೂ. ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.
PM @narendramodi has announced an ex-gratia of Rs. 2 lakh from PMNRF to be given to the next of kin of each deceased in the unfortunate incident at a political rally in Karur, Tamil Nadu. The injured would be given Rs. 50,000. https://t.co/UmPmpPUqZD
— PMO India (@PMOIndia) September 28, 2025