ನವದೆಹಲಿ:ಕಾಂಚನಜುಂಗಾ ಎಕ್ಸ್ಪ್ರೆಸ್ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ನಡೆದ ರೈಲ್ವೆ ಅಪಘಾತ ದುಃಖಕರವಾಗಿದೆ.ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಸ್ಥಳಕ್ಕೆ ತೆರಳುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Share.
Exit mobile version