ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಎಸ್.ಎಂ.ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು, ಎಲ್ಲಾ ವರ್ಗದ ಜನರು ಮೆಚ್ಚಿಕೊಂಡಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಕೆಲಸ ಮಾಡಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಅವರು ನೀಡಿದ ಗಮನಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳಲಾಗುತ್ತದೆ. ಶ್ರೀ ಎಸ್.ಎಂ.ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರಾಗಿದ್ದರು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Shri SM Krishna Ji was a remarkable leader, admired by people from all walks of life. He always worked tirelessly to improve the lives of others. He is fondly remembered for his tenure as Karnataka’s Chief Minister, particularly for his focus on infrastructural development. Shri… pic.twitter.com/Wkw25mReeO
— Narendra Modi (@narendramodi) December 10, 2024
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.