ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಈ ವೇಳೆ ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
#WATCH | Delhi | PM Narendra Modi paid last respects to late former PM Dr Manmohan Singh and offered condolences to his family today
(Video source: DD) pic.twitter.com/J1gfRICZCB
— ANI (@ANI) December 27, 2024
ಕೇಂದ್ರ ಗೃಹ ಸಚಿವ ಅಮಿತ್ ಶಾ ಅಗಮಿಸಿದ್ದು, ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಹೂಗುಚ್ಚ ಇಟ್ಟು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಅಂತಿಮ ನಮನ ಸಲ್ಲಿಸಿದ್ದಾರೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.