ಬೆಂಗಳೂರು: ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದ್ದು, ಇದೀಗ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಬೆಂಗಳೂರಿನ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT) ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸ್ಥೆಯ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ ಹಂತ-3ಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.
44.65 ಕಿ.ಮೀ. ವ್ಯಾಪ್ತಿಯ 15,611 ಕೋಟಿ ರೂ. ವೆಚ್ಚದ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ನೇರವೇರಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇಂದು, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಅವರು ಸಂವಾದ ನಡೆಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯಪಾಲರು ಸಾಥ್ ನೀಡಿದ್ದಾರೆ.
ಈ ಮಾರ್ಗವು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ ವರೆಗೆ ವಿಸ್ತರಿಸಿದೆ. ಹಳದಿ ಮಾರ್ಗವು 16 ನಿಲ್ದಾಣಗಳನ್ನು ಹೊಂದಿದೆ. ಈ ಯೋಜನೆಯು 5,000 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಹಳದಿ ಮಾರ್ಗವು ಬೆಂಗಳೂರಿನ ದಕ್ಷಿಣ ಭಾಗದ ವಸತಿ ಪ್ರದೇಶಗಳನ್ನು ಐಟಿ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಸಂಪರ್ಕಿಸುತ್ತದೆ. ಆರಂಭದಲ್ಲಿ ಹಳದಿ ಮಾರ್ಗದಲ್ಲಿ ಮೂರು ರೈಲುಗಳು ಮಾತ್ರ ಸಂಚರಿಸಲಿವೆ. ರೈಲುಗಳು ಚಾಲಕ ರಹಿತವಾಗಿರಲಿವೆ. ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ.
ಇದಕ್ಕೂ ಮೊದಲು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ನಂತರ ರಸ್ತೆ ಮಾರ್ಗವಾಗಿ 11:15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತೆರಳಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.
#WATCH | Karnataka Dy Chief Minister DK Shivakumar felicitates PM Narendra Modi during the 'Next-Gen Mobility for a Next-Gen City' programme in Bengaluru. pic.twitter.com/PAc8imPmE3
— ANI (@ANI) August 10, 2025
#WATCH | Karnataka Chief Minister Siddaramaiah felicitates PM Narendra Modi during the 'Next-Gen Mobility for a Next-Gen City' programme in Bengaluru. pic.twitter.com/VoS4PaUPxL
— ANI (@ANI) August 10, 2025
#WATCH | Bengaluru | Prime Minister Narendra Modi undertakes a metro ride from RV Road (Ragigudda) to Electronic City metro station via the Yellow line that PM Modi inaugurated earlier today.
(Source: ANI/DD) pic.twitter.com/U4SrPGjWWc
— ANI (@ANI) August 10, 2025