ನವದೆಹಲಿ : ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತತ 12 ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಬಳಿಕ ಸ್ವಾತಂತ್ರ್ಯದಿನ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣ ಮುಗಿಸಿದ ನಂತರ ಭೇಟಿಯಾದರು.
#WATCH | Prime Minister Narendra Modi met students, who were special guests at #IndependenceDay celebrations at the Red Fort, after concluding his address. pic.twitter.com/vHEykLoTRt
— ANI (@ANI) August 15, 2025