ನವದೆಹಲಿ: ದೆಹಲಿಯ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ನಡೆದ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾದರು.
ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಪಾಲ್ಗೊಂಡಿರುವ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಪ್ರಧಾನಿ ಮೋದಿ, ‘ದೆಹಲಿಯಲ್ಲಿರುವ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಷನ್‌ನಲ್ಲಿ ಬೆಳಿಗ್ಗೆ ನಡೆದ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದೆ ಎಂದು ಹೇಳಿದ್ದಾರೆ.
ಈ ಪ್ರಾರ್ಥನೆಯು ಪ್ರೀತಿ, ಶಾಂತಿ ಮತ್ತು ಸಹಾನುಭೂತಿಯ ಕಾಲಾತೀತ ಸಂದೇಶವನ್ನು ಪ್ರತಿಬಿಂಬಿಸುತ್ತದೆ. ಕ್ರಿಸ್ಮಸ್‌ನ ಚೈತನ್ಯವು ಸಮಾಜದಲ್ಲಿ ಸಾಮರಸ್ಯ ಮತ್ತು ಸದ್ಭಾವನೆಯನ್ನು ಪ್ರೇರೇಪಿಸಲಿ’ ಎಂದು ಪ್ರಧಾನಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
May Christmas bring renewed hope, warmth and a shared commitment to kindness.
Here are highlights from the Christmas morning service at The Cathedral Church of the Redemption. pic.twitter.com/BzvKYQ8N0H
— Narendra Modi (@narendramodi) December 25, 2025








