ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿರುವುದರಿಂದ ಭದ್ರತೆ ಹೆಚ್ಚಿಸಲಾಗಿದೆ. ಬೆಂಗಳೂರಿಗೆ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಸುಮಾರು 10 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಟ್ರಾಫಿಕ್ ಪೊಲೀಸರು ಕೆಲ ಮಾರ್ಗಗಳಿಗೆ ನಿರ್ಬಂಧ ಹೇರಿದ್ದು, ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ.
ಪ್ರಧಾನಿ ಮೋದಿ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ 3 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ, ಅವರು ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ಆರ್ವಿ ರಸ್ತೆ (ರಾಗಿಗುಡ್ಡ) ದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಪ್ರಯಾಣ ಕೈಗೊಳ್ಳಲಿದ್ದಾರೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ, ಪ್ರಧಾನಿಯವರು ಬೆಂಗಳೂರಿನಲ್ಲಿ ನಗರ ಸಂಪರ್ಕ ಯೋಜನೆಗಳನ್ನು ಉದ್ಘಾಟಿಸಿ ಶಿಲಾನ್ಯಾಸ ಮಾಡಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
#WATCH | Bengaluru, Karnataka: Security heightened in view of Prime Minister Narendra Modi's visit to Bengaluru today
PM Modi will flag off 3 Vande Bharat Express trains at KSR Railway Station in Bengaluru. Thereafter, he will flag off the Yellow line of the Bangalore metro and… pic.twitter.com/w2mNXVXWUZ
— ANI (@ANI) August 10, 2025