ನವದೆಹಲಿ: ಜುಲೈನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ರಷ್ಯಾ ಸಿದ್ಧತೆ ನಡೆಸುತ್ತಿದೆ ಎಂದು ರಷ್ಯಾದ ಸರ್ಕಾರಿ ಸುದ್ದಿ ಸಂಸ್ಥೆ ಆರ್ಐಎ ವರದಿ ಮಾಡಿದೆ.
ಈ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನ ಭೇಟಿ ಮಾಡಲಿದ್ದಾರೆ.
ಮಾರ್ಚ್ನಲ್ಲಿ ಪ್ರಧಾನಿ ಮೋದಿಯವರಿಗೆ ಮಾಸ್ಕೋಗೆ ಭೇಟಿ ನೀಡುವಂತೆ ಮುಕ್ತ ಆಹ್ವಾನವಿತ್ತು ಎಂದು ಕ್ರೆಮ್ಲಿನ್ ಹೇಳಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮಾಸ್ಕೋಗೆ 5 ದಿನಗಳ ಭೇಟಿಯ ಸಂದರ್ಭದಲ್ಲಿ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದರು.