ಧಾರವಾಡ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಇಂದು ಧಾರವಾಡ ಹೈಕೋರ್ಟ್ ಪೀಠದಲ್ಲಿ ನ್ಯಾ. ಎಂ. ನಾಗಪ್ರಸನ್ನ ಅವರು ತೀರ್ಪು ಪ್ರಕಟಿಸಲಿದ್ದಾರೆ.
ಇಂದು ಯಡಿಯೂರಪ್ಪ ವಿರುದ್ಧ ಪ್ರಕರಣದ ಬಗ್ಗೆ ತೀರ್ಪು ಹೊರಬೀಳಲಿದೆ.ಕೇಸ್ ರದ್ದು ಕೋರಿ ಅರ್ಜಿ ಬಗ್ಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.ನ್ಯಾ ಎಂ ನಾಗಪ್ರಸನ್ನ ಅವರ ಪೀಠ ಈ ಒಂದು ತೀರ್ಪು ಪ್ರಕಟಿಸಲಿದೆ. ಪ್ರಕರಣದ ಕೋರಿ ಮಾಜಿ ಸಿಎಂ ಯಡಿಯೂರಪ್ಪ ಅವರು ಅರ್ಜಿ ಸಲ್ಲಿಸಿದ್ದರು ಬೆಳಗ್ಗೆ 10:30ಕ್ಕೆ ನ್ಯಾಯ ನಾಗಪ್ರಸನ್ ಅವರ ಪೀಠ ತೀರ್ಪು ನೀಡಲಿದೆ ಧಾರವಾಡ ಹೈಕೋರ್ಟ್ ಪೀಠದಿಂದ ಇಂದು ತೀರ್ಪು ಪ್ರಕಟವಾಗಲಿದೆ.
ಪ್ರಕರಣ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು. ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ನಾಳೆ ಬೆಳಗ್ಗೆ 10.30ಕ್ಕೆ ತೀರ್ಪು ನೀಡಲಿದೆ. ನಿರೀಕ್ಷಣಾ ಜಾಮೀನು ಬಗ್ಗೆಯೂ ತೀರ್ಮಾನಿಸಲಿದೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣದ ದೋಷಾರೋಪ ಪಟ್ಟಿಯನ್ನು ಈಗಾಗಲೇ ಸಿಐಡಿ ಪೊಲೀಸರು ದಾಖಲಿಸಿದ್ದಾರೆ. ಈವರೆಗೆ ಖುದ್ದು ಹಾಜರಾತಿಯಿಂದ ಬಿಎಸ್‌ವೈಗೆ ಕೋರ್ಟ್ ಅನುಮತಿ ನೀಡಿತ್ತು. ಅಲ್ಲದೇ ಬಂಧನದಿಂದಲೂ ಮಧ್ಯಂತರ ರಕ್ಷಣೆ ಮಾಡಿತ್ತು.