ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ನೀಡಲಾಗಿದೆ.
ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಯಡಿಯೂರಪ್ಪ ದೆಹಲಿ ಇರುವ ಕಾರಣ ಇಂದು ವಿಚಾರಣೆಗೆ ಹಾಜರಾಗಿಲ್ಲ.
ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು.
ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ ಮರುದಿನ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ, ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ.