ಕೋಲಾರ : ಮುಳಬಾಗಿಲು ಪಟ್ಟಣದಲ್ಲಿ ಶ್ರೀ ರಾಮನ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗುಣಗುಂಟೆಪಾಳ್ಯದಲ್ಲಿ ಸಂಕ್ರಾತಿ ಹಬ್ಬದ ಅಂಗವಾಗಿ ಶ್ರೀ ರಾಮನ ಬ್ಯಾನರ್ ಹಾಗೂ ಫ್ಲಕ್ಸ್ ಗಳನ್ನು ಹಾಕಲಾಗಿತ್ತು.ನಿನ್ನೆ ರಾತ್ರಿ ಕಿಡಿಗೇಡಿಗಳು ಬ್ಲೇಡ್ನಿಂದ ರಾಮನ ಕಟ್ ಔಟ್ ಹಾಗೂ ಫ್ಲಾಕ್ಸ್ ಗಳನ್ನು ಮಾಂಸ ಕಡಿಯುವ ಮಚ್ಚಿನಿಂದ ಹರಿದು ಹಾಕಿ ಶಾಂತಿ ಕದಡುವಕೆಲಸ ನಡೆದಿದೆ.
ಘಟನೆ ಹಿನ್ನೆಲೆ
ಇದೇ 22ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮಂದಿರ ಉದ್ಘಾಟನೆ ಕಾರ್ಯಕ್ರಮ ಆಯೋಜನೆ ಮಾಡಿದ್ದು ದೇಶದ ರಾಮನ ಭಕ್ತರಲ್ಲಿ ಸಂಭ್ರಮ ಮನೆ ಮಾಡಿದ್ದು ಒಂದೆಡೆಯಾದರೆ ಇನ್ನೊಂದೆಡೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಶ್ರೀರಾಮನ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಹರಿದು ಹಾಕಿ ಗಲಭೆಯನ್ನು ಸೃಷ್ಟಿಸಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲಿನ ಗುಣಗಂಟೆಪಾಳ್ಯದಲ್ಲಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ 10:4ರ ಸುಮಾರಿಗೆ ಕಿಡಿಗೇಡಿಗಳು ಶ್ರೀ ರಾಮನ ಬ್ಯಾನರ್ ನನ್ನು ಬ್ಲೇಡ್ ಇಂದ ಫ್ಲೆಕ್ಸ್ ಹರಿದಿದ್ದಾರೆ ಎಂದು ಹೇಳಲಾಗುತ್ತಿದೆ.ಸಂಕ್ರಾಂತಿ ಹಬ್ಬ ಹಿನ್ನಲೆಯಲ್ಲಿ ಶ್ರೀರಾಮನ ಕಟೌಟ್ ಹಾಗೂ ಫ್ಲೆಕ್ಸ್ ಅನ್ನು ಅಳವಡಿಸಲಾಗಿತ್ತು.
ಯುವಕರು ಅಳವಡಿಸಿದ್ದ ಕಟೌಟ್ ಅನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ ಎಂದ ಹೇಳಲಾಗುತ್ತಿದ್ದು. ಘಟನಾ ಸ್ಥಳಕ್ಕೆ ಮುಳಬಾಗಿಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯ ಪೊಲೀಸರು ಸಿಸಿ ಕ್ಯಾಮರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.ಸ್ಥಳಕ್ಕೆ ಸಂಸದ ಮುನಿಸ್ವಾಮಿ ಸೇರಿ ಹಲವು ಮುಖಂಡರು ಆಗಮಿಸಿದ್ದಾರೆ.