ರಾಮನಗರ : ರಾಮನಗರ ಜಿಲ್ಲೆಯಲ್ಲಿ ಪುಂಡರ ವ್ಹಿಲಿಂಗ್ ಹಾವಳಿ ಹೆಚ್ಚಾಗಿದ್ದು,ಇದೀಗ ಬೈಕ್ ವ್ಹಿಲಿಂಗ್ ಮಾಡುತ್ತಿದ್ದ ಪುಂಡರನ್ನು ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಹೋಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೈಕ್ ವ್ಹಿಲಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿಯ ತಂದೆಯನ್ನು ರಾಮನಗರ ಪೊಲೀಸರು ಬಂಧಿಸಿದ್ದು, ಈ ಸಂಬಂಧ 6 ಜನರ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.
ಈ ಒಂದು ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದ್ದು. ಚನ್ನಪಟ್ಟಣದ ಸಂಚಾರಿ ಠಾಣೆ ಪೊಲೀಸರಾದ ಜಯಕುಮಾರ್ ಹಾಗೂ ಬಸವರಾಜ್ ಮೇಲೆ ಹಲ್ಲೆ ನಡೆಸಿ ಬೈಕ್ ಕಿತ್ತುಕೊಂಡು ಹೋದ ಆರೋಪ ಕೇಳಿ ಬಂದಿದೆ. ಸೈಫ್ ಖಾನ್ ಮತ್ತು ಆತನ ಗ್ಯಾಂಗ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.
ರಾಮನಗರದ ಬೀಡಿ ಕಾಲೋನಿ ನಿವಾಸಿಯಾಗಿರುವ ಸೈಫ್ ಖಾನ್ ಚನ್ನಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ವೀಲಿಂಗ್ ಮಾಡುತ್ತಿದ್ದರು. ಈ ಬಗ್ಗೆ ಚನ್ನಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸೈಫ್ ಖಾನ್ ನನ್ನು ಬಂಧಿಸಿ ಬೈಕ್ ಜಪ್ತಿಗೆ ಪೊಲೀಸರು ತೆರಳಿದ್ದಾರೆ ಎನ್ನಲಾಗಿದೆ.
ಘಟನೆ ಸಂಭಂದ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಫ್ ಖಾನ್ ಮತ್ತು ಆತನ ತಂದೆ ಯೂಸುಫ್ ಖಾನ್ ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. BNS ಕಾಯ್ದೆ ಅಡಿ 132 352 310ರಡಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಸೈಫ್ ಖಾನ್ ತಂದೆ ಯೂಸುಫ್ ಖಾನ್ ನಾನು ಅರೆಸ್ಟ್ ಮಾಡಿದ್ದಾರೆ. ಇನ್ನುಳಿದಂತೆ ಪ್ರಮುಖ ಆರೋಪಿ ಸೇರಿದಂತೆ ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.