ಮಂಗಳೂರು : ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಕೊಲೆ, ದರೋಡೆ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ರೌಡಿಗಳಿಗೆ, ಕಾಮುಕರಿಗೆ ಪೋಲೀಸರ ಭಯವೆ ಇಲ್ಲದಂತಾಗಿದೆ.ಇದೀಗ ನಿನ್ನೆ ಮಂಗಳೂರಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಲಾಂಗು ಮಚ್ಚುಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈಯ್ಯಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ಮಾಹಿತಿ ಪೊಲೀಸರಿಗೆ ಮೊದಲೇ ತಿಳಿದಿತ್ತು. ಅತೀಯಾದ ಮುಸ್ಲಿಮರ ಒಲೈಕೆಯಿಂದ ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದೆ ಎಂದಿದ್ದಾರೆ.
ಮುಸಲ್ಮಾನರ ಸೋಶಿಯಲ್ ಮೀಡಿಯಾದಲ್ಲಿ ಹತ್ಯೆಯ ಸಂದೇಶ ಹರಿದಾಡಿತ್ತು. ಪೊಲೀಸರಿಗೆ ಮೊದಲೇ ಗೊತ್ತಿದ್ದರೂ ಸುಮ್ಮನಾಗಿದ್ದಾರೆ ಎಂದು ಸನೀಲ್ ಕುಮಾರ್ ಹೇಳಿದ್ದಾರೆ. ಮುಸ್ಲಿಮರನ್ನು ಕೇಂದ್ರವಾಗಿಟ್ಟು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಶವದ ಮೇಲೆ ಕಾಂಗ್ರೆಸ್ ರಾಜಕಾರಣ ರಾಜ್ಯವನ್ನು ಈ ಪರಿಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.