ಕಲಬುರಗಿ : ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರು ಇಬ್ಬರು ಅಂತಾರಾಜ್ಯ ದರೋಡೆಕೋರರ ಮೇಲೆ ಫೈರಿಂಗ್ ನಡೆಸಿದ್ದಾರೆ.
ಹೌದು, ಕಲಬುರಗಿಯಲ್ಲಿ ಇಬ್ಬರು ಅಂತಾರಾಜ್ಯ ಕಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.ಕಲಬುರಗಿಯಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂನಿಮದ 18 ಲಕ್ಷ ರೂ. ದೋಚಿದ್ದ ಖದೀಮರ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಹರಿಯಾಣ ಮೂಲದ ತಸ್ಲಿಮ್, ಶರೀಫ್ ಬಂಧಿತ ಅಂತಾರಾಜ್ಯ ಕಳ್ಳರಾಗಿದ್ದಾರೆ. ಇಬ್ಬರನ್ನು ಬಂಧಿಸಲು ಹೋಗಿದ್ದ ವೇಳೆ ಕಲಬುರಗಿ ಗ್ರಾಮೀಣ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಕಳ್ಳರ ಮೊಣಕಾಲಿಗೆ ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಘಟನೆಯಲ್ಲಿ ಪಿಎಸ್ ಐ ಬಸವರಾಜ್ ಹಾಗೂ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.