ಬೆಂಗಳೂರು : ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು.ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.