ದಾವಣಗೆರೆ : ದಾವಣಗೆರೆಯಲ್ಲಿ ಪೊಲೀಸರು ಭರ್ಜರಿ ಕಯಾಚರಣೆ ನಡೆಸಿದ್ದು ಖಾಸಗಿ ಹೋಟೆಲ್ ನಲ್ಲಿ ಅಕ್ರಮವಾಗಿ ಜೂಜು ಆಡುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ 26 ಜನರನ್ನು ವಶಕ್ಕೆ ಪಡೆದುಕೊಂಡು 25 ಲಕ್ಷ ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಹೌದು ನಗರದ ಡೆಂಟಲ್ ಕಾಲೇಜ್ ರಸ್ತೆಯ ಹೋಟೆಲ್ ಒಂದರಲ್ಲಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಹೋಟೆಲ್ ನಲ್ಲಿ ಅಕ್ರಮವಾಗಿ ಜೂಜು ಆಡುತ್ತಿದ್ದಾಗ ಈ ವೇಳೆ ಅಲ್ಲೇ ಜೂಜಾಡುತ್ತಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದು, ಅಡ್ಡೆಯಲ್ಲಿದ್ದ 24,86,500 ರೂ. ಹಣವನ್ನು ಜಪ್ತಿ ಮಾಡಿದ್ದಾರೆ.