ವಿಜಯಪುರ: ವಿಜಯಪುರದಲ್ಲಿ ಮೈಕ್ರೋ ಫೈನಾನ್ಸ್, ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಸ್ ಪಿ ಲಕ್ಷ್ಮಣ ನಿಂಬರಗಿ ಆದೇಶದ ಮೇರೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿ, ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಜಿಲೆಯ ವಿವಿಧೆಡೆಗಳಲ್ಲಿ ಪೊಲೀಸರು ದಾಳಿ ನಡೆಸಿದ್ದು, ಹಣ, ದಾಖಲೆ ಪತ್ರಗಳು, ಚಿನ್ನಾಭರಣಗಳ ಪರಿಶೀಲನೆ ನಡೆಸಿದ್ದಾರೆ.
ಮೈಕ್ರೋಫೈನಾನ್ಸ್ ಹಾಗೂ ಅಕ್ರಮ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.