ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ದಾಖಲೆ ಸೃಷ್ಟಿ ಮಾಡುತಿದ್ದವರ ಸೆಂಟರ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಸೆಂಟರ್ ಗಳ ಮೇಲೆ ದಾಳಿ ನಡೆಸಿ, ನಕಲಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಆಧಾರ್ ಕಾರ್ಡ್ ಮಾರ್ಕ್ಸ್ ಕಾರ್ಡ್ ಎಲ್ಲಾ ಫೋರ್ಜರಿ ಮಾಡುತ್ತಿದ್ದರು.
ಈ ವೇಳೆ ಪೊಲೀಸರು ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಯಶವಂತ್ (20) ಹಾಗೂ ರಘುವೀರ್ (26) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೈಬರ್ ಸೆಂಟರ್ ಒಂದರಲ್ಲಿ ಇವರು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ನಕಲಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಧಾರ್ ಕಾರ್ಡ್ ಮಾರ್ಕ್ಸ್ ಕಾರ್ಡ್ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.