ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ರೇವ್ ಪಾರ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ್ದು, 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೇವಿಗೆರೆ ಕ್ರಾಸ್ ಬಳಿ ಇರುವ ಅಯಾನಾ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ದಾಳಿ ವೇಳೆ 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. 115 ಜರಿಗೂ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ.
 
		



 




