ಬೆಂಗಳೂರು : ಬೆಂಗಳೂರಿನಲ್ಲಿ ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಭಾರತಿನಗರ, ಹಲಸೂರು, ಶಿವಾಜಿನಗರ, ಹೆಣ್ಣೂರು, ಬಾಣಸವಾಡಿ, ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಡಿಸಿಪಿ ದೇವರಾಜ್ ನಿರ್ದೇಶನದಲ್ಲಿ ದಾಳಿ ನಡೆಸಲಾಗಿದೆ.
ಹಲಸೂರು ರೌಡಿಶೀಟರ್ ಅಪೋಯ್, ಪ್ರಭು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.