ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ರೇಡ್ ನಡೆಸಿದ್ದಾರೆ. ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ವಾಯುವ್ಯ ವಿಭಾಗದ ಡಿಸಿಪಿ ಡಿ.ಎಲ್.ನಾಗೇಶ್ ನೇತೃತ್ವದಲ್ಲಿ ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಬ್ಯಾಡರಹಳ್ಳಿ, ಪೀಣ್ಯ, ಸೋಲದೇವನಹಳ್ಳಿ, ರಾಜಗೋಪಾಲನಗರ ಠಾಣೆ,ಬಾಗಲಗುಂಟೆ ಪೊಲೀಸರು ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.