ಬೆಂಗಳೂರು : ಯೂಟ್ಯೂಬರ್ ಸಮೀರ್ ಎಂ.ಡಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇಂದು ಬೆಂಗಳೂರಿನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಹೌದು, ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಲ್ಲಹಳ್ಳಿ ನಿವಾಸಕ್ಕೆ ದೌಡಾಯಿಸಿದ ಬೆಳ್ತಂಗಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಮೀರ್ ಮನೆಯಲ್ಲಿರುವಾಗಲೇ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ವಾರೆಂಟ್ ಪಡೆದು ಪೊಲೀಸರು ದಾಳಿಗೆ ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.