ಕೊಡಗು : ಕೊಡಗು ಜಿಲ್ಲೆಯಲ್ಲಿ ಮೊಹಮ್ಮದ್ ಸವದ್ ಎಂಬ ಯುವಕನ ರಾಸಲೀಲೆ ವಿಡಿಯೋಗಳು ವೈರಲ್ ಆಗಿದ್ದು, ಭಾರಿ ಸಂಚಲನ ಮೂಡಿಸಿವೆ. ಅನ್ಯ ಧರ್ಮದ ಯುವತಿಯರ ಜತೆ ರಾಸಲೀಲೆ ನಡೆಸಿ ವಿಡಿಯೋ ಮಾಡಿಟ್ಟುಕೊಂಡಿದ್ದ ಸವದ್, ಅನೇಕ ರಾಜಕಾರಣಿಗಳ ಮಗಳಂದಿರ ಜತೆಗೂ ಕಾಮಕೇಳಿ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸದ್ಯ ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ವಿಡಿಯೋಗಳು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.
ವೈರಲ್ ಆದ ವಿಡಿಯೋಗಳಲ್ಲಿ ಕೆಲ ಯುವತಿಯರು ಅನ್ಯ ಧರ್ಮಕ್ಕೆ ಸೇರಿದವರಾಗಿದ್ದು, ಕೆಲವರು ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ನಾಯಕರ ಪುತ್ರಿಯರು ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಪ್ರಕರಣವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಅವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.








