ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಅಲ್ಲದೇ ಮಹಿಳೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್‌ಐಆರ್ ಗೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿದ್ದಂತ ಮಧ್ಯಂತರ ಜಾಮೀನ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೂಡಿದೆ.

ಶಾಸಕ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ಸಂತೋಷ ಗಜಾನನ ಭಟ್ ಇಂದು ನಡೆಸಿದರು.

ಕೋರ್ಟ್ ಇಂದು ಮಧ್ಯಾಹ್ನ 2.45 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ. ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ವಕೀಲರು ವಾದ ಮಂಡಿಸಿದ್ದು, ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.

Share.
Exit mobile version