ಬೆಂಗಳೂರು : ಅಶ್ಮಿಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು ಇದೀಗ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಕುಟುಂಬದ ಒತ್ತಡದ ಹಿನ್ನೆಲೆಯಲ್ಲಿ ಇದೀಗ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈಗ ಕುಟುಂಬಸ್ಥರ ಒತ್ತಡದ ಮೇರೆಗೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕಳೆದ ಹತ್ತು ದಿನಗಳಿಂದ ಪ್ರಜ್ವಲ್ ವಿದೇಶದಲ್ಲಿ ತಲೆ ಮರಸಿಕೊಂಡಿದ್ದರು. ರೇವಣ್ಣ ಬಂಧನದ ಬೆನ್ನೆಲೆ ಪ್ರಜ್ವಲ್ ಗೆ ಕುಟುಂಬದಿಂದ ಒತ್ತಡ ಹೆಚ್ಚಾಗಿದೆ. ಜಾಮೀನು ಸಿಗಲಿ ಸಿಗದಿರಲಿ ವಿಚಾರಣೆಗೆ ಹಾಜರಾಗುವಂತೆ ಒತ್ತಡ ಹೇರಿದ್ದಾರೆ. ಹೀಗಾಗಿ ವಕೀಲರಿಗೆ ಮಾಹಿತಿ ನೀಡಿ ಪ್ರಜ್ವಲ್ ರೇವಣ್ಣ ಇದೀಗ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಕಳೆದ 10 ದಿನಗಳಿಂದ ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್ಪೋರ್ಟ್ ಪಡೆದು ಜರ್ಮನಿಗೆ ತೆರಳಿದ್ದರು. ವಿದೇಶಕ್ಕೆ ತೆರಳಿದ ಬಳಿಕ ಸಂತ್ರಸ್ತ ಮಹಿಳೆ ಪ್ರಜ್ವಲ್ ರೇವಣ್ಣ ಹಾಗೂ ಎಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್ಐಟಿ ರಚನೆ ಮಾಡಿತ್ತು.

ಇದೀಗ ಅಪಹರಣ ಪ್ರಕರಣದಲ್ಲಿ ಎಚ್ಡಿ ರೇವಣ್ಣ ಅವರ ಬಂಧನವಾಗಿದ್ದು ಇದರ ಬೆನ್ನಲ್ಲೇ ಕುಟುಂಬಸ್ಥರ ಒತ್ತಡದ ಮೇರೆಗೆ ಇಂದು ಪ್ರಜ್ವಲ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಜ್ವಲ್ ಬೆಂಗಳೂರಿಗೆ ಆಗಮಿಸಿದ ತಕ್ಷಣ ಎಸ್ಐಟಿ ಅವರನ್ನು ಬಂಧಿಸುತ್ತದೆಯೋ ಅಥವಾ ವಿಚಾರಣೆಗೆ ಒಳಪಡಿಸುತ್ತದೆಯೋ ಎಂದು ಕಾದು ನೋಡಬೇಕಿದೆ.

Share.
Exit mobile version