ತುಮಕೂರು : ಮಾರ್ಚ್ 28ಕ್ಕೆ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಆ ಒಂದು ಸಂಪುಟ ಸಭೆಯ ಬಳಿಕ ಒಳ ಮೀಸಲಾತಿ ಜಾರಿಗೆ ಬರಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಒಳ ಮೀಸಲಾತಿ ಜಟಾಪಟಿ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಇದೇ 28ರಂದು ಸಿಎಂ ಸಿದ್ದರಾಮಯ್ಯ ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಬಹುಶಹ ಅವತ್ತು ಈ ಒಂದು ವಿಚಾರ ಬಗೆಹರಿಯುತ್ತದೆ ಎಂದು ಅಂದುಕೊಂಡಿದ್ದೇನೆ. ಸಭೆಯಲ್ಲಿ ತೀರ್ಮಾನವಾದ ಬಳಿಕ ರಾಜ್ಯ ಸರ್ಕಾರ ಆದೇಶ ಹೊರಡಿಸುತ್ತದೆ.
ಸರ್ಕಾರದ ಆದೇಶದ ಬಳಿಕ ನಮ್ಮ ಆಯ್ಕೆ ಪ್ರಕ್ರಿಯೆ ಶುರುವಾಗುತ್ತದೆ. 50,000 ಹುದ್ದೆ ನೇಮಕ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ.ಪೊಲೀಸ್ ಇಲಾಖೆಯಲ್ಲಿ 8 ಸಾವಿರ ಹುದ್ದೆಗಳು ಖಾಲಿ ಇವೆ. ರಾಜ್ಯ ಸರ್ಕಾರ ತೀರ್ಮಾನ ನಂತರ ತುರ್ತಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ತುಮಕೂರು ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಸಿಲಿಂಡರ್ ಸಮಸ್ಯೆ ಇಲ್ಲ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ತಲೆದೂರಿದೆ ಎನ್ನುತ್ತಿದ್ದಾರೆ. ಆದರೆ ಗ್ರಹ ಬಳಿಕೆಯ ಸಿಲಿಂಡರ್ಗಳ ಸಮಸ್ಯೆ ಇಲ್ಲ ಹೋಟೆಲ್ನವರಿಗೆ ಒಂದೆರಡು ದಿನ ಸಮಸ್ಯೆ ಆಗಬಹುದು. ಕಾಳಸಂತೆಯಲ್ಲಿ ಸಿಲಿಂಡರ್ ಗಳನ್ನು ಮಾರಾಟ ಮಾಡಿದರೆ ಕಠಿಣವಾದ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಿದ್ದಗಂಗಾ ಮಠದಲ್ಲಿ ಗ್ರಹ ಸಚಿವ ಜಿ ಪರಮೇಶ್ವರ್ ಎಚ್ಚರಿಕೆ ನೀಡಿದರು.








