ಬೆಂಗಳೂರು : ಈಗಾಗಲೇ ನವೆಂಬರ್ನಲ್ಲಿ ಕ್ರಾಂತಿ ಆಗಲಿದೆ ಎಂದು ವಿಪಕ್ಷ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದು ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಸಂಪುಟ ಪುಣೆ ರಚನೆಯ ಕುರಿತು ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಈ ಮೂಲಕ ಸಂಪುಟ ಪುನಾ ರಚನೆ ಆಗುವುದು ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ.
ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿ, ಸಂಪುಟ ಪುನಾರಚನೆ ವೇಳೆ ನೋಡೋಣ ಎಂದು ಹೇಳಿದರು. ನಾಲ್ಕು ಮಂದಿ ಶಾಸಕರನ್ನು ಹೊಂದಿರುವ ಜಿಲ್ಲೆಗೆ ಸಚಿವ ಸ್ಥಾನದ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂದರು.








