ಹಾಸನ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ, ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರು ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಹೊಳೆನರಸೀಪುರದ ರಾಘವೇಂದ್ರಸ್ವಾಮಿ, ಆಂಜನೇಯಸ್ವಾಮಿ, ಮಾವಿನಕೆರೆ ರಂಗನಾಥಸ್ವಾಮಿ ಲಕ್ಷ್ಮಿನರಸಿಂಹ ಸೇರಿದಂತೆ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಜ್ವಲ್ ಅವರ ತಂದೆ ರೇವಣ್ಣ ಹಾಗೂ ತಾಯಿ ಭವಾನಿ ಅವರು ಜತೆಗಿದ್ದರು.

ಲೋಕಸಭಾ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಿದ್ದು. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

Share.
Exit mobile version