ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಹಾಸನ ಸಂಶೋಧ ಪ್ರಚೋಲ ರೇವಣ್ಣ ಅವರು ಕಳೆದ 15 ದಿನಗಳಿಂದ ವಿದೇಶದಲ್ಲಿ ಇದ್ದಾರೆ ಇದೀಗ ಮೇ 15ರಂದು ಟಿಕೆಟ್ ಬುಕ್ ಮಾಡಿದ್ದ ಪ್ರಜ್ವಲ್ ರೇವಣ್ಣ ಕಳೆದ ನಾಲ್ಕು ದಿನಗಳ ಹಿಂದೆ ಅದನ್ನು ಕ್ಯಾನ್ಸಲ್ ಮಾಡಿದರು ಇದೀಗ ಮತ್ತೆ ಬಿಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಹೌದು ಎಸ್ ಐ ಟಿ ನೀಡುವ ನೋಟಿಸ್ ಹಾಗೂ ಸಿಐಡಿ ಮುಖಾಂತರ ಬ್ಲ್ಯೂ ಕಾರ್ನರ್ ನೋಟಿಸ್ ನೀಡುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಇಂದೇ ಬೆಂಗಳೂರಿಗೆ ಆಗಮಿಸಬೇಕಾಗಿತ್ತು, ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಬುಕ್ ಮಾಡಿದ ಟಿಕೇಟನ್ನು ಕ್ಯಾನ್ಸಲ್ ಮಾಡಿದ್ದರು.
ಇದೀಗ ಪ್ರಜ್ವಲ್ ಮತ್ತೆ ಟಿಕೆಟ್ ಬುಕ್ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ LH 764 ವಿಮಾನದಲ್ಲಿ ಟಿಕೆಟ್ ಬುಕ್ ಮಾಡಿದ್ದಾರೆ. ಇಂದು ಬೆಳಗ್ಗೆ ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿದ್ದಾರೆ. ಇಂದು ಮಧ್ಯರಾತ್ರಿ ಬೆಂಗಳೂರಿಗೆ ವಿಮಾನ ಆಗಮಿಸಲಿದೆ ಎಂದು ಹೇಳಲಾಗುತ್ತಿದೆ.
ಇದು ಲೂಫ್ತಾನ್ಸ ಏರ್ ಲೈನ್ಸ್ ಗೆ ಸೇರಿದ ವಿಮಾನ ಎಂದು ಹೇಳಲಾಗುತ್ತಿದೆ. ಈ ಹಿಂದೆ ಮಾಡಿದ್ದ ಟಿಕೆಟ್ ಅನ್ನು ಪ್ರಜ್ವಲ್ ಕ್ಯಾನ್ಸಲ್ ಮಾಡಿದ್ದರು. ಇದೀಗ ಅದೇ ವಿಮಾನದಲ್ಲಿ ಬಿಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಲಾಗಿದೆ ಮಧ್ಯಾಹ್ನ ಎರಡು ಗಂಟೆಗೆ ಈ ಒಂದು ವಿಮಾನ ಜರ್ಮನಿಯಿಂದ ಹೊರಡಲಿದೆ. ಸದ್ಯ ಪ್ರಜ್ವಲ್ ಜರ್ಮನಿಯ ಮ್ಯುನಿಚ್ ಎಂಬಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ.