ರಾಯಚೂರು: ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ಸ್ವಾಮೀಜಿ ವಾಸ್ತವ್ಯ ಹೂಡಿದ್ದರು.ರಾಯಚೂರಿನಲ್ಲಿ ಭಾಗವಹಿಸಿದ್ದ ವೇಳೆಯಲ್ಲಿ ಲಘು ಹೃದಯಾಘಾತವಾಗಿದೆ.
ಕೂಡಲೇ ಸ್ವಾಮೀಜಿ ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ಸ್ವಾಮೀಜಿ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿರುವ ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಅವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಹೈದರಾಬಾದ್ ಗೆ ಕಳಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








