ನವದೆಹಲಿ : ಬಿಪಿಎಸ್‌ಸಿ ಅಭ್ಯರ್ಥಿಗಳನ್ನು ಬೆಂಬಲಿಸಿ ಜನವರಿ 2ರಿಂದ ಆಮರಣ ಉಪವಾಸ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಪಾಟ್ನಾದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರ ತಂಡವು ಪ್ರಶಾಂತ್ ಕಿಶೋರ್ ಅವರ ಆರೋಗ್ಯವನ್ನು ಪರೀಕ್ಷಿಸಲು ಶೇಖ್‌ಪುರ ಹೌಸ್‌ಗೆ ತಲುಪಿತು. ಪರಿಸ್ಥಿತಿ ನೋಡಿದ ವೈದ್ಯರ ತಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದೆ. ಇದಾದ ನಂತರ ಅವರ ಬೆಂಬಲಿಗರು ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಮೇದಾಂತ ಆಸ್ಪತ್ರೆಗೆ ಕರೆದೊಯ್ದರು. ಇಲ್ಲಿ ಅವರ ಚಿಕಿತ್ಸೆ ಮುಂದುವರಿದಿದೆ.
ಪ್ರಶಾಂತ್ ಕಿಶೋರ್ ಮಂಗಳವಾರ ಬೆಳಗ್ಗೆ 10 ಗಂಟೆಯವರೆಗೆ ಜನರೊಂದಿಗೆ ಮಾತನಾಡುತ್ತಿದ್ದರು. ಸ್ವಲ್ಪ ಸಮಯದ ನಂತರ ಅವರು ಇದ್ದಕ್ಕಿದ್ದಂತೆ ಪ್ರಜ್ಞಾಹೀನರಾದರು. ಇದಾದ ನಂತರ ವೈದ್ಯರನ್ನು ಕರೆಸಲಾಯಿತು. ಪರೀಕ್ಷೆಯ ನಂತರ ಅವರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದಾರೆ. ಕೂಡಲೇ ಅವರನ್ನು ಪಾಟ್ನಾದ ವೇದಾಂತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.