ಮಂಗಳೂರು : ಕಳೆದ 2022 ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ನನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು, ನಿನ್ನೆ ಕತಾರ್ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು.
ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್ಐಎ ಸಲ್ಲಿಸಿದ ಚಾರ್ಜ್ ಶೀಟ್ನಲ್ಲಿದೆ.ಎನ್ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು. ಇದೀಗ ಆತನನ್ನು ಸಹ ಅರೆಸ್ಟ್ ಮಾಡಿದ್ದು ಟ್ವೀಟ್ ನಲ್ಲಿ NIA ಈ ಕುರಿತು ಪ್ರಕಟಣೆ ಹೊರಡಿಸಿದೆ.
Absconder Wanted in Praveen Nettaru Murder Case Arrested by NIA on Arrival from Qatar pic.twitter.com/jqoYktY3UI
— NIA India (@NIA_India) July 4, 2025