ಬೆಂಗಳೂರು : ಇಂದಿನಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲಿದ್ದು, ಬೆಂಗಳೂರಿನ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಲ್ಲದೆ ದಾಖಲೆಯ 17ನೇ ಬಾರಿ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ, ಕಾನೂನು, ಕನ್ನಡ ಮತ್ತು ಸಂಸ್ಕೃತಿ, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ, ತೋಟಗಾರಿಕೆ, ಪ್ರವಾಸೋದ್ಯಮ, ಗಣಿ ಮತ್ತು ಭೂವಿಜ್ಞಾನ, ಕಾರ್ಮಿಕ, ಒಳಾಳಡಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ ಇಲಾಖೆ ಜೊತೆ ಸಭೆ ನಡೆಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ 17ನೇ ಬಾರಿ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಶಕ್ತಿ ಭವನದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಲ್ಲದೆ ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ತಿಳಿಸಿದರು.








